man falling
ಮೈಸೂರಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಮೈಸೂರಿನ ಬಿ.ಎಂ. ಹ್ಯಾಬಿಟೇಟ್ ಮಾಲ್‌ನಲ್ಲಿ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಣಸೂರು ತಾಲೂಕಿನ ಎಲೆಕ್ಟ್ರಿಷಿಯನ್ ಸುನೀಲ್ (35) ಸ್ಥಳದಲ್ಲೇ ಮೃತಪಟ್ಟವರು. ಅವರನ್ನು ರಕ್ಷಿಸಲು ಮುಂದಾದ ಗೋಕುಲಂನ ಚಂದ್ರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡವರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಯಲಕ್ಷ್ಮಿಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಯಲಕ್ಷ್ಮಿಪುರಂನಲ್ಲಿರುವ ಬಿ.ಎಂ. ಹ್ಯಾಬಿಟೇಟ್ ಮಾಲ್ ಕಟ್ಟಡದ ನಾಲ್ಕನೇ ಹಂತಸ್ತಿನಲ್ಲಿ


