Menu

ಗರುಡ ಮಾಲ್ ಬಳಿ ಶಾಸಕ ಹ್ಯಾರಿಸ್‌ ಆಪ್ತನ ಕೊಲೆ

ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಲೈವ್ ಬ್ಯಾಂಡ್‌ನಿಂದ ಶನಿವಾರ ರಾತ್ರಿ ಹೊರ ಬರುತ್ತಿದ್ದಾಗ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ 1 ಗಂಟೆಗೆ ಘಟನೆ ನಡೆದಿದ್ದು, ಆನೆಪಾಳ್ಯ ನಿವಾಸಿ ಶೇಖ್‌ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಹತ್ಯೆ ಮಾಡಿದ್ದಾರೆ. ಜೊತೆಯಲ್ಲಿದ್ದ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ