Menu

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಲಾಭದಾಯಕವಾಗಿಸಬೇಕು: ಮುಖ್ಯಮಂತ್ರಿ

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಎಲ್ಲಾ ಪ್ರಯತ್ನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಡಳಿತ ಮಂಡ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಗಗನ ಚುಕ್ಕಿ ಜಲಪಾತೋತ್ಸವ -2025  ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 113 ಕೋಟಿಗಳನ್ನು ಒದಗಿಸಲಾಗಿದೆ.