Mangalasutra
ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್
ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು


