Menu

ರಾಯಚೂರಿನಲ್ಲಿ ಮಲಗಿದ್ದಾಗ ಹಾವು ಕಚ್ಚಿ ತಾಯಿ, ಮಗ ಸಾವು

ರಾಯಚೂರು ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ ರಾತ್ರಿ ಮಲಗಿದ್ದ ತಾಯಿ ಮತ್ತು ಮಗನಿಗೆ ಹಾವು ಕಚ್ಚಿ ಇಬ್ಬರೂ ಮೃತಪಟ್ಟಿದ್ದಾರೆ. ಸುಬ್ಬಮ್ಮ (35) ಮತ್ತು ಪುತ್ರ ಬಸವರಾಜ್ (10 ವರ್ಷ) ಮೃತಪಟ್ಟವರು. ರಾತ್ರಿ ಮನೆಯಲ್ಲಿ ಮಲಗಿದ್ದಾಗ ಹಾವು ಕಚ್ಚಿದೆ. ಮನೆಯವರು ತಾಯಿ ಮತ್ತು ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ ವಾಹನ ತಯಾರಿ ಮಾಡಿಕೊಂಡು ಆಸ್ಪತ್ರೆಗೆ ಹೋಗುವಷ್ಟರಲ್ಲಿ ತಾಯಿ-ಮಗ ಇಬ್ಬರೂ ಮೃತಪಟ್ಟಿದ್ದಾರೆ. ಹಾವು ಕಚ್ಚಿದಾಗ ಮಲಗಿದ್ದರಿಂದ ತಕ್ಷಣ ಗೊತ್ತಾಗಿಲ್ಲ. ವಿಷ