Menu

ಶಾಸಕ ಮೇಟಿ ನಿಧನ, ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮುಂದೂಡಿಕೆ: ಡಿಕೆ ಶಿವಕುಮಾರ್

“ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬುಧವಾರ ನಿಗದಿಯಾಗಿದ್ದ ‘ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು.  “ಹೆಚ್.ವೈ. ಮೇಟಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರ ನಿಧನದ ಸುದ್ದಿ ಬಹಳ ದುಃಖ ತಂದಿದೆ. ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಮುಖ್ಯಮಂತ್ರಿಗಳು