Nepal floods
ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತಕ್ಕೆ 52 ಮಂದಿ ಬಲಿ
ನೇಪಾಳದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹವುಂಟಾಗಿದ್ದು ಭೂಕುಸಿತ ಸಂಭವಿಸಿ ಕನಿಷ್ಠ 52 ಮಂದಿ ಪ್ರಾಣ ಕಳೆದುಕೊಂಡಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ. ಶನಿವಾರ ರಾತ್ರಿ ಸುರಿದ ವಯಾಪಕ ಮಳೆಯಿಂದಾಗಿ ಭೂಕುಸಿತವುಂಟಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ನಾನಾ ಕಡೆ 37 ಜನರು ಮೃತಪಟ್ಟಿದ್ದಾರೆ. ಭಾನುವಾರ ಬೆಳಿಗ್ಗೆ ರೌತಹತ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಮೂವರು ಅಸು ನೀಗಿದ್ದಾರೆ. ಮಳೆ ಸಂಬಂಧಿ ಅವಘಡಗಳಿಂದಾಗಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ. ರಸುವಾ ಜಿಲ್ಲೆಯಲ್ಲಿ ಪ್ರವಾಹಕ್ಕೆ


