NepalProtest
ಸೋಷಿಯಲ್ ಮೀಡಿಯಾ ಬ್ಯಾನ್ ಹಿಂಪಡೆದರೂ ನೇಪಾಳ ಪ್ರಧಾನಿ ಒಲಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರ
ನೇಪಾಳದಲ್ಲಿ ಸೋಷಿಯಲ್ ಮೀಡಿಯಾಗಳ ಬ್ಯಾನ್ ಹಿಂಪಡೆಯಲಾಗಿದ್ದರೂ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜಕೀಯ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕೊರತೆ ಖಂಡಿಸಿ ನೇಪಾಳದ ನಾಗರಿಕರು ದಂಗೆ ಎದ್ದು ಪ್ರಧಾನಮಂತ್ರಿ ಕೆಪಿ ಶರ್ಮಾ ಒಲಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿದ್ದು, ಪ್ರತಿಭಟನಾಕಾರರು ಪ್ರಧಾನಿ ಕೆಪಿ ಶರ್ಮಾ ಒಲಿ ಅವರ ಮನೆ ಮೇಲೆ ಕಲ್ಲು ತೂರಿದ್ದಾರೆ. ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.


