new couple
ಮದುವೆಯಾಗಿ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆಗೈದ ಪತ್ನಿ
ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಮದುವೆಯಾದ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿಸಿದ್ದಾಳೆ. ಆರೋಪಿಗಳಾದ ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಯನ್ನು ಪೋಷಕರು ಒಪ್ಪಲಿಲ್ಲ. ಮಾ.5 ರಂದು ಪ್ರಗತಿಯನ್ನು ದಿಲೀಪ್ ಎಂಬಾತನ ಜೊತೆ ಬಲವಂತವಾಗಿ ಮದುವೆ ಮಾಡಿದರು. ಮದುವೆಯಾಗಿ ಎರಡು ವಾರಗಳಷ್ಟೇ ಕಳೆದಿತ್ತು. ಪ್ರಗತಿ ಪ್ರಿಯಕರ ಅನುರಾಗ್ ಜೊತೆ ಸೇರಿ ಯೋಜನೆ ರೂಪಿಸಿ ಗಂಡನನ್ನು ಹತ್ಯೆ ಮಾಡಿಸಿದ್ದಾಳೆ.


