new year celeberation
ಹೊಸವರ್ಷದಂದು ನಂದಿ ಗಿರಿಧಾಮ ಸಾರ್ವಜನಿಕರಿಗೆ ಬಂದ್
ಬೆಂಗಳೂರು:ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್ ಮಾಡಲಾಗಿದೆ. ಅತಿಥಿಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಿಷೇಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರರಿಂದ ಆದೇಶ ಹೊರಡಿಸಿದ್ದಾರೆ. ಕುಡಿದು ಪ್ರವಾಸಿಗರ ಮೋಜು ಮಸ್ತಿ ಮಾಡೋದನ್ನು ತಡೆಯುವ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ


