Menu

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಫ್ಲೈಓವರ್‌ಗಳು ಕ್ಲೋಸ್‌, ಮೆಟ್ರೋ ನಿಲ್ದಾಣ ಬಂದ್‌, ವಾಹನ ಸಂಚಾರ ನಿರ್ಬಂಧ

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಸುರಕ್ಷತಾ ಕ್ರಮಗಳ ಭಾಗವಾಗಿ ಬೆಂಗಳೂರು ನಗರದಲ್ಲಿ ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ 50 ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ಡ್ರಂಕ್ ಅಂಡ್ ಡ್ರೈವ್ ತಪಾಸಣೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಇಪ್ಪತ್ತು ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತದೆ. ನಗರದಲ್ಲಿ 166 ಕಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತದೆ.