New Year Guidelines
ಹೊಸ ವರ್ಷಾಚರಣೆ: ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಗೈಡ್‌ಲೈನ್ಸ್
ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೆಲವೇ ದಿನಗಳಷ್ಟೇ ಬಾಕಿಯಿವೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಮಯದಲ್ಲಿ ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಕಠಿಣ ನಿಯಮಗಳನ್ನು ಒಳಗೊಂಡ ಗೈಡ್‌ಲೈನ್ಸ್ ಅನ್ನು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆಗೆ ಯುವ ಸಮೂಹ ಸಿದ್ಧತೆ ನಡೆಸಿದ್ದು, ಪೊಲೀಸ್ ಇಲಾಖೆ ಅಧಿಕಾರಿಗಳು ಪಬ್, ಬಾರ್, ರೆಸ್ಟೋರೆಂಟ್ ಮಾಲೀಕರ ಜೊತೆ ಸಭೆ ನಡೆಸಿ ಸುರಕ್ಷತೆಯ ಉದ್ದೇಶದಿಂದ ಕಟ್ಟು ನಿಟ್ಟಿನ ನಿಯಮ


