Menu

ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು

ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಅಸು ನೀಗಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಜನರು ಮಹಾಕುಂಭಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಜನಸಂದಣಿ ಸೇರಿದ್ದ ಕಾರಣ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಯಿತು ಎಂದು ತಿಳಿದು ಬಂದಿದೆ. ಅತಿ ಹೆಚ್ಚು ಟಿಕೆಟ್ ಮಾರಾಟ ಮಾಡಿರುವ ರೈಲ್ವೆ ಇಲಾಖೆಯು ಜನರನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಪ್ರತಿ ಗಂಟೆಗೆ 1,500 ಸಾಮಾನ್ಯ