Nikhil Kumaraswamy JDS
ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಸರ್ಕಾರದ ವಿರುದ್ಧ ಹೋರಾಟ: ನಿಖಿಲ್ ಕುಮಾರಸ್ವಾಮಿ
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಜಪ್ತಿ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಡ್ರಗ್ಸ್ ದಂಧೆಕೋರರನ್ನು ಪತ್ತೆ ಹಚ್ಚಲು ಮಹಾರಾಷ್ಟ ಪೊಲೀಸರು ಬರಬೇಕಾದರೆ, ಕರ್ನಾಟಕದ


