Menu

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ  ಸರ್ಕಾರ ಉತ್ತರ ನೀಡಿಲ್ಲ: ಆರ್‌ ಅಶೋಕ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಆ ಭಾಗಕ್ಕೆ ಹೊಸದಾಗಿ ಏನೂ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಎರಡು ಗಂಟೆ, ಐವತ್ತೈದು ನಿಮಿಷ ಮಾತಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಹೊಸ ಘೋಷಣೆ ಮಾಡದೆ ಸಂಪೂರ್ಣ ವಿಫಲರಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಹಣ ನೀಡಲು ಏಕೆ ವಿಳಂಬವಾಗಿದೆ ಎಂದು ಸರ್ಕಾರ ಸರಿಯಾಗಿ ತಿಳಿಸಿಲ್ಲ.