North Karnataka problems
ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ: ಡಿಕೆ ಶಿವಕುಮಾರ್
“ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯೇ ಎಂದು ಕೇಳಿದಾಗ,


