Menu

ಹೆಸರಘಟ್ಟದಲ್ಲಿ ಕ್ಯೂ-ಸಿಟಿಗೆ 6.17 ಎಕರೆ ಜಾಗ ಮಂಜೂರು

ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ