Menu

ಮದುವೆ ಆಗಲು ಒತ್ತಡ ಹೇರಿದ ನರ್ಸ್ ಕತ್ತು ಸೀಳಿ ಕೊಂದ ಸಹದ್ಯೋಗಿ!

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತುಕೊಯ್ದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೊಲೆ ಮಾಡಿ ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಮೃತ ಯುವತಿಯ ಸಹದ್ಯೋಗಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕುಮಾರಸ್ವಾಮಿ ಲೇಔಟ್ ನ ಪ್ರಗತಿಪುರದ ಬಾಡಿಗೆ ಮನೆಯಲ್ಲಿ ಡಿಸೆಂಬರ್ 24ರಂದು ರಾತ್ರಿ ಕತ್ತು ಸೀಳಿ ಹತ್ಯೆಗೈಯ್ಯಲಾಗಿತ್ತು. ಡಿಸೆಂಬರ್ 25ರಂದು ಪ್ರಕರಣ ಬೆಳಕಿಗೆ ಬಂದಿತ್ತು. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತಿದ್ದ ಮಮತಾ,