Menu

ಎಷ್ಟಾದರೂ ಹಣ-ಸವಲತ್ತು ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ

ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ, ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ 2025  ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ.