Menu

ಬೆಂಗಳೂರಿನಲ್ಲಿ ಓಂ ಶಕ್ತಿ ಭಕ್ತರ ಮೇಲೆ ಕಲ್ಲೆಸೆತ: ನಾಲ್ವರು ಬಾಲಕರ ಬಂಧನ

ಚಾಮರಾಜಪೇಟೆ ಬಳಿಯ ಜೆಜೆ ನಗರ ಠಾಣೆ ವ್ಯಾಪ್ತಿಯಲ್ಲಿ ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪ್ರಕರಣ ಸಂಬಂಧ ನಾಲ್ಕು ಬಾಲಕರನ್ನು ಬಂಧಿಸಲಾಗಿದೆ. ವಿ.ಎಸ್ ಗಾರ್ಡಡ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ವರದರಾಜು ಎಂಬವರ ಮಗಳ ತಲೆಗೆ ಗಂಭೀರ ಗಾಯವಾಗಿದೆ. ಇಬ್ಬರು ಮಹಿಳೆಯರ ಕಾಲಿಗೆ ಗಾಯವಾಗಿದೆ. ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು