Menu

ಓಣಂ: ಬೆಂಗಳೂರಿನಿಂದ ಕೇರಳಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಓಣಂ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರು-ಕೇರಳ ಮಧ್ಯೆ ಕೆಎಸ್‌ಆರ್‌ಟಿಸಿಯಿಂದ 90 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ಮೈಸೂರು ರಸ್ತೆ ಮತ್ತು ಶಾಂತಿನಗರ ಬಸ್ ನಿಲ್ದಾಣ ಸೇರಿದಂತೆ ಬೆಂಗಳೂರಿನ ಪ್ರಮುಖ ಟರ್ಮಿನಲ್‌ಗಳಿಂದ ಹೊರಡಲಿವೆ. ಹಬ್ಬದ ಮುಗಿದು ಹಿಂತಿರುಗುವವರೆಗೂ ಈ ಹೆಚ್ಚುವರಿ ಬಸ್ ಸೇವೆ ಲಭ್ಯವಿರುತ್ತದೆ. ಸೆಪ್ಟೆಂಬರ್ 2 ರಿಂದ 4 ರವರೆಗೆ ಓಣಂಗಾಗಿ ಕೇರಳದ ಊರುಗಳಿಗೆ ತೆರಳುವ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಈ ಕ್ರಮ