Menu

ತೆಲಂಗಾಣ ಸುರಂಗ ಕುಸಿತ: 16 ದಿನದ ಬಳಿಕ ಒಂದು ಶವ ಪತ್ತೆ

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತದಲ್ಲಿ 16 ದಿನಗಳ ಬಳಿಕ ಒಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರು ಪತ್ತೆಯಾಗಿಲ್ಲ. ಪತ್ತೆಯಾಗಿರುವ ಮೃತ ಕಾರ್ಮಿಕನನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಹಾಗೂ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ