Menu

ಒಂದು ದೇಶ ಒಂದು ಚುನಾವಣೆ’ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು: ವೆಂಕಯ್ಯ ನಾಯ್ಡು

ಬೆಂಗಳೂರು: ಭಾರತದಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆದರೆ ಹಣಕಾಸಿನ ವೆಚ್ಚ ಕಡಿಮೆಯಾಗಲಿದೆ. ಇದು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಒಂದು ದೇಶ ಒಂದು ಚುನಾವಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದಿನ ಮಾನ್ಯ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ನೀಡಿದ ವರದಿಯ ಬಳಿಕ ಒಂದೇ ಚುನಾವಣೆಯ ವಿಚಾರ ಹೆಚ್ಚು ಚರ್ಚೆಗೆ