Menu

ವಿಮಾನ ನಿಲ್ದಾಣ, ಯೋಜನಾ ಪ್ರಾಧಿಕಾರಗಳು ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿಪಡಿಸಿ: ಡಿಕೆ ಶಿವಕುಮಾರ್

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್  ಪುಷ್ಪನಮನ