Press day
ಮಾಧ್ಯಮಗಳಿಂದ ಅಧಿಕಾರಸ್ಥರ ಓಲೈಕೆ ಸಲ್ಲ, ಊಹಾ ಪತ್ರಿಕೋದ್ಯಮದಿಂದ ಸಮಾಜಕ್ಕೆ ಅಪಾಯ: ಸಿಎಂ
ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ, ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು