puneeth rajkumar
ಪುನೀತ್ ರಾಜ್ ಕುಮಾರ್ ಚಿತ್ರದಲ್ಲಿ ಡ್ಯಾನ್ಸ್ ಮಾಡಿದ್ದ ನಟಿ ಶೆಫಾಲಿ ನಿಧನ
ಮುಂಬೈ: ಪುನೀತ್ ರಾಜ್ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಡ್ಯಾನ್ಸ್ ಮಾಡಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಯಾವುದೇ ಪ್ರಯೋಜನ ಆಗದೇ ಮೃತಪಟ್ಟಿದ್ದಾರೆ ಎಂದು ಮೂಲಗಳು