Menu

ರೈಲ್ವೆ ಯಾರ್ಡ್‌ನಲ್ಲಿ ಭೀಕರ ಅಗ್ನಿ ಅವಘಡ: ಮೂರು ರೈಲು ಬೋಗಿಗಳು ಬೆಂಕಿಗೆ ಆಹುತಿ

ಉದಯಕಾಲ ನ್ಯೂಸ್, ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆ ರೈಲ್ವೆ ಯಾರ್ಡ್‌ನಲ್ಲಿ ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಹಠಾತ್ ಬೆಂಕಿ ತಗುಲಿರುವ ಆತಂಕಕಾರಿ ಘಟನೆ ನಡೆದಿದೆ. ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್‌ನಲ್ಲಿ ನಿಲ್ಲಿಸಲಾಗಿದ್ದ ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಪಡಿಸಿದ್ದಾರೆ. ಮಾಕ್ ಡ್ರಿಲ್‌ಗಾಗಿ ಬಳಸುತ್ತಿದ್ದ ಬೋಗಿಗಳು ಅಪಘಾತಕ್ಕೀಡಾದ ಈ ಮೂರು ಬೋಗಿಗಳನ್ನು ತುರ್ತು ಪರಿಸ್ಥಿತಿ