Menu

ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ ಮಳೆಗೆ ಬುಡ ಸಮೇತ ಎದ್ದ ಮರ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಯುವಕ ಸ್ಥಳದಲ್ಲೇ ಅಸು ನೀಗಿದ್ದಾನೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ

ಮಳೆಗೆ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿ ಸಾವು

ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೀದರ್‌ನ ಹುಲಸೂರು ಪಟ್ಟಣದಲ್ಲಿ ನಡೆದಿದೆ. ಎಂಟು ವರ್ಷದ ಅಲಿ ಮೊಮಿನ್ ಮೃತಪಟ್ಟ ಬಾಲಕ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಕಾರಣ ವಿದ್ಯುತ್‌ ಕಂಬದಿಂದ ಮನೆಗೆ

ಧಾರಾಕಾರ ಮಳೆಗೆ ಮೇಲ್ಛಾವಣಿಯ ಕಲ್ಲು ಬಿದ್ದು ಬಾಲಕಿ ಸಾವು

ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆ ಸುರಿದ ರಭಸಕ್ಕೆ ಮನೆಯ ಮೇಲ್ಛಾವಣಿ ಮೇಲಿಟ್ಟಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಮೂರು ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್

ನಿಡಗುಂದಿಯಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಜೀವಂತ ಸಮಾಧಿ

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮಳೆಗೆ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ. ಮೃತರ ಪತಿ ಶಿವಾನಂದ ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ಗೌರೀಶ್ವರ ದೇವಸ್ಥಾನ ಸಮೀಪವಿರುವ ಮಹಾದೇವಿ ಅವರ ಹಳೆಯ ಮಣ್ಣಿನ ಮನೆ ಮಳೆಗೆ

ಮನೆ ಮುಂದೆ ನಿಂತಿದ್ದ ಶಿಕ್ಷಕ ಗುಡುಗು ಸಿಡಿಲಿನ ಅಬ್ಬರಕ್ಕೆ ಬೆಚ್ಚಿ ಹೃದಯಾಘಾತಕ್ಕೆ ಬಲಿ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಅಬ್ಬರಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ (56) ಮೃತಪಟ್ಟವರು. ಅವರು

ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ