rain disasters
ಉತ್ತರಪ್ರದೇಶದಲ್ಲಿ ಮಳೆ, ಬಿರುಗಾಳಿ, ಸಿಡಿಲಿಗೆ 89 ಜನ ಬಲಿ
ಉತ್ತರ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಬಿರುಗಾಳಿ, ಸಿಡಿಲಿಗೆ ಕನಿಷ್ಠ 89 ಜನ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿರುಗಾಳಿಯಿಂದ ಆದ ಅನಾಹುತಗಳಲ್ಲಿ ೫೩ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 114ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ. 87 ಮನೆಗಳು ಸಂಪೂರ್ಣ ಕುಸಿದು ಬಿದ್ದಿವೆ. ಮರಗಳು ಉರುಳಿ ಬಿದ್ದು ಮತ್ತು ಗೋಡೆ ಕುಸಿದು ಹೆಚ್ಚಿನ ಸಾವುಗಳು ಸಂಭವಿಸಿವೆ. ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳ


