rain news
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮುಂದಿನ ಏಳು ದಿನ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಪ್ರಮಾಣದಲ್ಲಿ ಹೆಚ್ಚಾಗಿದೆ. ಬಿರುಗಾಳಿಯ ವೇಗ ತೀವ್ರವಾಗಿರುವುದರಿಂದ ಬೋರ್ಗೆರೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಸೂಚನೆ


