Menu

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶ: ಚೂನಪ್ಪ ಪೂಜಾರಿ ಸೇರಿ ರೈತ ಮುಖಂಡರ ವಶ

ಉದಯಕಾಲ ನ್ಯೂಸ್, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ಹಾಗೂ ಪ್ರೋತ್ಸಾಹಧನ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಬೆಳಗಾವಿ ತಾಲೂಕಿನ ಮುಕ್ತಿಮಠದಿಂದ ಚನ್ನಮ್ಮ ವೃತ್ತದವರೆಗೆ ಪಾದಯಾತ್ರೆ ಹಾಗೂ ‘ಜೈಲ್ ಭರೋ’ ಚಳವಳಿಗೆ ಮುಂದಾಗಿದ್ದ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಸೇರಿದಂತೆ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ಹಾಗೂ ಗದ್ದಲ