Menu

ರಾಜಕಾಲುವೆ ಒತ್ತುವರಿ ತೆರವು ಮತ್ತು ಹೂಳೆತ್ತಲು ಆಯುಕ್ತ ಕೆ.ಎನ್.ರಮೇಶ್ ಸೂಚನೆ

ಉದಯಕಾಲ ನ್ಯೂಸ್, ಬೆಂಗಳೂರು: ಮಳೆಗಾಲ ಆರಂಭಕ್ಕೂ ಮುನ್ನವೇ ಬೆಂಗಳೂರು ನಗರದಲ್ಲಿ ರಾಜಕಾಲುವೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್.ರಮೇಶ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ನಗರದ ವಿವಿಧ ಪ್ರದೇಶಗಳಲ್ಲಿ ರಾಜಕಾಲುವೆಗಳ ಒತ್ತುವರಿ, ಅಡೆತಡೆಗಳು ಮತ್ತು ಒಳಚರಂಡಿ ನಿರ್ವಹಣೆಯಿಲ್ಲದೆ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಅವರು ಖುದ್ದು ಸ್ಥಳ ಪರಿಶೀಲನೆ ನಡೆಸಿ ಗಂಭೀರವಾಗಿ ಪರಿಗಣಿಸಿದ್ದಾರೆ. ಜೆ.ಪಿ. ನಗರ ಹಾಗೂ ಬನ್ನೇರುಘಟ್ಟ ರಸ್ತೆ ಸ್ಥಳ