Thursday, February 13, 2025
Menu

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ಅರಮನೆಯಲ್ಲಿ

ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ: ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ಇದು ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ. ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಕ್ಷಯಪಾತ್ರೆಯಂತಾಗಿದೆ