Menu

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಢ: 100ಕ್ಕೂ ಹೆಚ್ಚು ವಾಹನ ಭಸ್ಮ

ಪೊಲೀಸರು ಜಫ್ತಿ ಮಾಡಿದ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ಸಂಭವಿಸಿದೆ. ಶೇಷಾದ್ರಿಪುರಂ ಬಳಿಯ ಜೆಡಿಎಸ್ ಕಚೇರಿ ಪಕ್ಕದಲ್ಲಿರುವ ಜಕ್ಕರಾಯನ ಕೆರೆ ಮೈದಾನದಲ್ಲಿಈ ದುರ್ಘಟನೆ ಸಂಭವಿಸಿದ್ದು, 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಹೋಗಿವೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ನಂದಿಸುವ ಕೆಲಸ ಮಾಡುತ್ತಿದೆ ಮೈದಾನದಲ್ಲಿ ಹುಲ್ಲು, ಗಿಡ