shivaraj tangadagi
ಬೆಳಗಾವಿ ಗಲಾಟೆ ಮುಂದುವರೆದರೆ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ದ : ಶಿವರಾಜ್ ತಂಗಡಗಿ
ಕೋಲಾರ: ಬೆಳಗಾವಿಯಲ್ಲಿ ಗಲಾಟೆ ಮಾಡುವವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದೇವೆ. ಹೀಗೆಯೇ ಮುಂದುವರಿದರೆ ಮುಂದಿನ ಕಠಿಣ ಕ್ರಮವಹಿಸುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಎಚ್ಚರಿಸಿದರು. ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಜತೆಯೂ ಈ ಸಂಬಂಧ ಮಾತನಾಡಿದ್ದೇವೆ. ಪುಂಡರ ಮೇಲೆ ನೇರವಾಗಿ ಕ್ರಮ ವಹಿಸಲಾಗುವುದು. ಬೆಳಗಾವಿ ನಮ್ಮ ರಾಜ್ಯದ ಪ್ರಮುಖ ಅಂಗ. ಅಲ್ಲೇ ಸುವರ್ಣಸೌಧ
ನಾಡಿನ ಅಭಿವೃದ್ಧಿಯಲ್ಲಿ ಸಂಸ್ಕೃತಿ-ಸಾಹಿತ್ಯ ಕಣ್ಣುಗಳಿದ್ದಂತೆ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ನಾಡಿನ ಅಭಿವೃದ್ಧಿ ಆಗಬೇಕಂದರೆ ಸಂಸ್ಕೃತಿ ಸಾಹಿತ್ಯ ಎರಡು ಕಣ್ಣುಗಳಿದ್ದಂತೆ. ಇವು ಚನ್ನಾಗಿದ್ದರೆ ನಾಡನ್ನು ನೋಡುವ ದೃಷ್ಟಿ ಚನ್ನಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಭಿಪ್ರಾಯಪಟ್ಟರು. ನಗರದಲ್ಲಿ ಬುಧವಾರ ಕರ್ನಾಟಕ