Menu

ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ಮನವಿ

ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45,000 MSME ಘಟಕಗಳು ನೋಂದಣಿಯಾಗಿದ್ದು,