Menu

ಸಿಜೆಐ ಮೇಲೆ ಷೂ ಎಸೆತ: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು ಎಂದ ಡಿಸಿಎಂ

ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿಕೆಶಿವಕುಮಾರ್  ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ