Menu

ಪ್ರಿಯಾಂಕ್‌ ಖರ್ಗೆ ಡಿಸಿಎಂ ಆಗಲಿದ್ದಾರೆ: ಶ್ರೀ ರಾಮುಲು

ಪ್ರಿಯಾಂಕ್‌ ಖರ್ಗೆ ರಾಜ್ಯದ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ಲ್ಯಾನ್ ನಡೆದಿದೆ ಎಂದರು. ಒಂದು ವೇಳೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಬಲ ಬಂದಂತಾಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ವಿನಾಕಾರಣ ಆರ್‌ಎಸ್‌ಎಸ್ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ.