Shri Sugunendra Thirtha
ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ: ಡಿಕೆ ಶಿವಕುಮಾರ್
“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಸುಗಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. “ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು


