sicurity tight
“ಆಪರೇಷನ್ ಸಿಂಧೂರ್” ಬಳಿಕ ರಾಜ್ಯದ ಡ್ಯಾಂ, ಏರ್‌ಪೋರ್ಟ್‌ಗಳಿಗೆ ಬಿಗಿ ಭದ್ರತೆ: ಸಚಿವ ಪರಮೇಶ್ವರ್
ಭಾರತದ ವಾಯುಪಡೆಯು ಉಗ್ರರ ತಾಣಗಳ ಮೇಲೆ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ನಡೆಸಿದ ಬಳಿಕ ಕೇಂದ್ರ ಸರ್ಕಾರದ ಸೂಚನೆಯನ್ವಯ ರಾಜ್ಯದಲ್ಲೂ ನಾಗರಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಡ್ಯಾಮ್‌ಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳಲ್ಲಿ ಮಾಕ್ ಡ್ರಿಲ್ ನಡೆಸಲಾಗುವುದು. ರಾಜ್ಯದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ವಾಪಸ್ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.


