Tuesday, December 09, 2025
Menu

ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ

ತುಮಕೂರು: ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಬೆಳಿಗ್ಗೆ 11.55ಕ್ಕೆ ಸರಿಯಾಗಿ ಶುಭ ಲಗ್ನದಲ್ಲಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ