Menu

ಪ್ರವಾಹ ಪರಿಹಾರ, ನೀರಾವರಿ ಯೋಜನೆಗೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳು ರಾಜ್ಯದ ಪ್ರಮುಖ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರದಿಂದ ಬಾಕಿ