siddaramiah
ಅವಶ್ಯವಿರುವ ಸರ್ಕಾರದ ಸೇವೆ ವಿಳಂಬ ಮಾಡದೇ ಪೂರೈಸಿ: ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್
ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ
ಜನಮನ್ನಣೆಗೆ ಪಾತ್ರರಾಗಿದ್ದ ನಾಯಕ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ
ದಾವಣಗೆರೆ: ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಳಿವಯಸ್ಸಿನಲ್ಲಿಯೂ ಅತ್ಯಂತ
ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯದ ಬಿಜೆಪಿ ನಾಯಕರು ಯಾಕೆ ಪ್ರಶ್ನಿಸುವುದಿಲ್ಲ ಎಂದು ಸಿಎಂ ಪ್ರಶ್ನೆ
ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು
ಅಧಿಕಾರ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನಿಸುತ್ತಾರೆ: ಸಿಎಂ ಸಿದ್ದರಾಮಯ್ಯ
ಮೈಸೂರು : ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ರಾಹುಲ್ ಗಾಂಧಿ ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ.
ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆಗೆ ಸಿಎಂ ಚಾಲನೆ
ಬೆಳಗಾವಿ.ಡಿ.20: (ಕರ್ನಾಟಕ ವಾರ್ತೆ) ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ
ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ
ಸಿಎಂ ಬದಲಾವಣೆ ವಿಷಯ ನಿಮಗೇಕೆ: ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಳಗಾವಿ: ಇಂದೂ ನಾನೇ ಮುಖ್ಯಮಂತ್ರಿ, ಮುಂದೇಯೂ ನಾನೇ ಮುಖ್ಯಮಂತ್ರಿ, ನನ್ನ ಪ್ರಕಾರ ಹೈಕಮಾಂಡ್ ಬೆಂಬಲವೂ ನನ್ನ ಪರವಾಗಿ ಇದೆ. ನಾನೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿ ಇರ್ತೀನಿ. ಮುಂದಿನ ಬಾರಿ ಕೂಡ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಸಮಸ್ಯೆಗಳ ಬಗ್ಗೆ
ಉ.ಕ. ಕ.ಕ ಅಭಿವೃದ್ಧಿಗೆ 46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ
ಬೆಳಗಾವಿ ಸುವರ್ಣಸೌಧ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂಪಾಯಿ 1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರೂಪಾಯಿ 46,277 ಕೋಟಿ ಹಣ ಖರ್ಚು ಮಾಡಿದೆ. ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ
ಸಿಎಂ ಆರೋಗ್ಯದಲ್ಲಿ ಏರುಪೇರು: ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಮಧ್ಯಾಹ್ನದ ಕಲಾಪಕ್ಕೆ ಗೈರಾದರು. ಹೊಟ್ಟೆನೋವು ಹಿನ್ನೆಲೆಯಲ್ಲಿ ಬೆಳಗಾವಿಯ ಸರ್ಕ್ಯೂಟ್ ಹೌಸ್‌ನಲ್ಲಿ ಸಂಜೆಯವರೆಗೆ ವಿರಮಿಸುತ್ತಿದ್ದು, ಅವರ ಈ ದಿನದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದರೆ ಗುರುವಾರ ಸದನಕ್ಕೆ ಆಗಮಿಸುತ್ತಾರೆ.




