siddaramiah
BJP-RSS-ABVP ಸೇರುತ್ತಿರುವ ಹಿಂದುಳಿದವರು, ದಲಿತರಿಗೆ ಏನು ಹೇಳೋದು: ಸಿದ್ದರಾಮಯ್ಯ ಬೇಸರ
ಬೆಂಗಳೂರು: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ, “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಉದ್ಘಾಟಿಸಿ ಮಾತನಾಡಿದರು. ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ.
ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಶೇಖರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: “ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ : ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ
ಬಿಜೆಪಿಯಿಂದ ರಾಜ್ಯದಲ್ಲಿ ಮತಗಳ್ಳತನ ವಿರುದ್ಧ 1 ಕೋಟಿ ಸಹಿ ಸಂಗ್ರಹ: ಸಿಎಂ ಸಿದ್ದರಾಮಯ್ಯ
ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು. ಇದರ ವಿರುದ್ಧ ರಾಜ್ಯದಲ್ಲಿ ಈವರೆಗೆ ಸುಮಾರು 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿಯ ಇಂದಿರಾ ಭವನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಬ್ಬಿಗೆ 3,300 ರೂ. ದರ ನಿಗದಿ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೇಟಿ ಕಾರಣ: ಸಿದ್ದರಾಮಯ್ಯ
ಬಾಗಲಕೋಟೆ: ಹೆಚ್.ವೈ.ಮೇಟಿ ನಿಷ್ಠಾವಂತ ರಾಜಕಾರಣಿ. ಅವರ ಒತ್ತಾಸೆಯಂತೆ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಶಾಸಕ ಹೆಚ್.ವೈ.ಮೇಟಿಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು
ರಾಜ್ಯಕ್ಕೆ ಸಿಎಂ ನೀವಾ? ಡಿಕೆಶಿ ಅವರಾ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ.
ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್
ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ




