siddaramiah
ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಮುಂದೆ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ
ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು. ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ.
ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ
ಶುಚಿತ್ವದ ಇತರ ನೌಕರರನ್ನೂ ಖಾಯಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಬೆಂಗಳೂರು: ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಹಜ್ ಯಾತ್ರಿಕರಲ್ಲಿ ಸಿಎಂ ಮನವಿ
ಬೆಂಗಳೂರು: ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ , ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ. ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡಿದರು. ಅವರು ಇಂದು ಕರ್ನಾಟ ರಾಜ್ಯ ಹಜ್
ಬಿಜೆಪಿ ಆರ್ ಎಸ್ ಎಸ್ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ ಗಡುಗು
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ವತಿಯಿಂದ ಸೋಮವಾರ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ
ಯುದ್ಧವೇ ಬೇಡ ಎಂದು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ: ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಬೀತು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ದೇವನಹಳ್ಳಿಯಲ್ಲಿ ಭಾನುವಾರ
ಕೆಕೆಆರ್- ಪಂಜಾಬ್ ಕಿಂಗ್ಸ್ ಪಂದ್ಯ ರದ್ದು
ಕೋಲ್ಕತಾ: ಕೋಲ್ಕತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು ಉಭಯ ತಂಡಗಳು ತಲಾ ಒಂದು ಅಂಕ ಹಂಚಿಕೊಂಡಿವೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್
ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ-ಕೆಲಸ ಜಾಸ್ತಿ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ
ಪಿರಿಯಾಪಟ್ಟಣ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು
ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬಾರದ ಸಂಘ ಪರಿವಾರದವರು ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ
ಮೈಸೂರು ಏ 26: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ




