Menu
12

ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ

ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ ಬಸವರಾಜು (40), ಸುರೇಶ್ (28) ಮೃತಪಟ್ಟವರು. ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೂಲಿ ಕೆಲಸ ಮಾಡಲು ಬೆಂಗಳೂರಿನತ್ತ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಈ