siriya
ದೇಶಬಿಟ್ಟು ಪಲಾಯನ ಮಾಡಿದ ಸಿರಿಯಾ ಅಧ್ಯಕ್ಷ ಅಸ್ಸಾದ್
ಬೈರತ್: ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್ ವರದಿ ಮಾಡಿದೆ. ಈ ಕುರಿತು ‘ಅಸೋಸಿಯೇಟ್ ಪ್ರೆಸ್’ ಜೊತೆ ಮಾತನಾಡಿದ ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯದ ಮುಖ್ಯಸ್ಥ ರಾಮಿ ಅಬ್ದುಲ್ ರೆಹಮಾನ್, ‘ಅಸ್ಸಾದ್ ಅವರು ಇಂದು ಮುಂಜಾನೆ ವಿಮಾನದ ಮೂಲಕ ತೆರಳಿದ್ದಾರೆ’ ಎಂದು ಹೇಳಿದರು.


