sisters death
ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ
ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ. ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದ ಬಳಿ ಮಧ್ಯಾಹ್ನ ಬಿಬಿಎಂಪಿ ಕಸದ ಲಾರಿ ತೆರಳುತ್ತಿದ್ದಾಗ ಸ್ಕೂಟರ್ ನಲ್ಲಿ ಬರುತ್ತಿದ್ದ ಸಹೋದರಿಯರು ಕಸದ ಲಾರಿಯನ್ನು ಎಡಗಡೆಯಿಂದ ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ,