SIT probe plea
ಬೆಂಗಳೂರು ಚುನಾವಣಾ ಅಕ್ರಮ: ಎಸ್‌ಐಟಿ ತನಿಖೆ ಮನವಿ ನಿರಾಕರಿಸಿದ ಸುಪ್ರೀಂ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಎಸ್‌ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿವೆ. ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸುಪ್ರೀಂ ನ್ಯಾಯಪೀಠ, ಎಸ್ಐಟಿಗೆ ತನಿಖೆ ವಹಿಸಲು ನಿರಾಕರಿಸಿತು. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳಬೇಕೆಂದು ಅರ್ಜಿದಾರರಿಗೆ ಸೂಚಿಸಿದೆ. ಅರ್ಜಿದಾರರ


