six year old girl
ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ
ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಮನೆಗೆ ಬಂದ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.